ಹಾವೇರಿ : ಲಾರಿ ಚಾಲಕನಿಂದ ಲಂಚ ಪಡೆಯುತ್ತಿದ್ದ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ನಡೆದಿದೆ.
ಲಾರಿಗೆ ಗ್ರಾವೇಲ್ ತುಂಬಲು ತಹಶೀಲ್ದಾರ್ ಹನುಮಂತಪ್ಪ12 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಂತೆಯೇ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಹನುಮಂತಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲಾರಿ ಚಾಲಕ ಮಂಜು ವಾಲೀಕಾರ್ ಎಂಬುವವರಿಂದ ಲಂಚ ಪಡೆಯುತ್ತಿದ್ದರು. ಸದ್ಯ ಲೋಕಾಯುಕ್ತ ಅಧಿಕಾರಿಗಳು ಹನುಮಂತಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.