ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಹೌದು. ಪ್ರಕರಣ ರದ್ದು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ವಿಚಾರಣೆ ನಡೆಸಿದ ಕೋರ್ಟ್ ಆರೋಪ ನಿಗದಿ ಮಾಡದಂತೆ ನ್ಯಾ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಕೊಂಚ ರಿಲೀಫ್ ಸಿಕ್ಕಿದೆ. ಮುಂದಿನ ಆದೇಶದವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ ಜ.16 ಕ್ಕೆ ವಿಚಾರಣೆ ಮುಂದೂಡಿದೆ.