ಗದಗ : ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ದುರ್ಮರಣಕ್ಕೀಡಾದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಗುಡಿಯಲ್ಲಿ ನಡೆದಿದೆ.
ಘಟನೆಯಲ್ಲಿ ಲಾರಿ ಸಂಪೂರ್ಣ ಸಜ್ಜು ಗುಜ್ಜಾಗಿದ್ದು, ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಸಾವಿನ ಸಂಖ್ಯೆ ಎಷ್ಟು ಎಂಬುದು ಇನ್ನೂ ಕೂಡ ನಿಖರವಾಗಿಲ್ಲ. ಅಪಘಾತದಲ್ಲಿ ಹಲವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.