alex Certify BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಬೈಕ್’ಗೆ ಟ್ರಕ್ ಡಿಕ್ಕಿಯಾಗಿ 10 ವರ್ಷದ ಬಾಲಕ ಸ್ಥಳದಲ್ಲೇ ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಬೈಕ್’ಗೆ ಟ್ರಕ್ ಡಿಕ್ಕಿಯಾಗಿ 10 ವರ್ಷದ ಬಾಲಕ ಸ್ಥಳದಲ್ಲೇ ಸಾವು.!

ಬೆಂಗಳೂರು : ಬೆಂಗಳೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು,

ಬೈ‍ಕ್’ಗೆ ಟ್ರಕ್ ಡಿಕ್ಕಿಯಾಗಿ ಟ್ರಕ್ ಹರಿದು 10 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಂಗಳೂರಿನ ಹೆಣ್ಣೂರು ಬಂಡೆ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಬೈಕ್ ಗೆ ಟ್ರಕ್ ಡಿಕ್ಕಿಯಾಗಿ ಕೆಳಗೆ ಬಿದ್ದ ಬಾಲಕನ ಮೇಲೆ ಟ್ರಕ್ ಹರಿದಿದೆ. ಪರಿಣಾಮ 10 ವರ್ಷದ ಭಾನುತೇಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಾಲಕ ತನ್ನ ಮಾವನ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಭಾನುತೇಜ್ ಮಾವನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...