alex Certify BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ವಾಟರ್ ಟ್ಯಾಂಕರ್ ಹರಿದು ಅಕ್ಕ-ತಮ್ಮ ಸಾವು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ವಾಟರ್ ಟ್ಯಾಂಕರ್ ಹರಿದು ಅಕ್ಕ-ತಮ್ಮ ಸಾವು..!

ಬೆಂಗಳೂರು : ವಾಟರ್ ಟ್ಯಾಂಕರ್ ಗೆ ಅಕ್ಕ-ತಮ್ಮ ಬಲಿಯಾದ ಘಟನೆ ಎಲೆಕ್ಟ್ರಾನಿಕ್ ಸಿಟಿಯ ದೊಡ್ಡನಾಗಮಂಗಲದಲ್ಲಿ ನಡೆದಿದೆ.

ಮೃತರನ್ನು ಮಧುಮಿತ (20) ರಂಜನ್ (19 ) ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಟ್ಯಾಂಕರ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಕ್ಕ-ತಮ್ಮಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಇಬ್ಬರ ಮೇಲೆ ಟ್ಯಾಂಕರ್ ಹರಿದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತ ಮಕ್ಕಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...