ಚಿತ್ರದುರ್ಗ : ಚಿತ್ರದುರ್ಗದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಲಾರಿ-ಟ್ರಕ್ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ.
ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ, ಟ್ರಕ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಲಾರಿ ಹಾಗೂ ಟ್ರಕ್ ಸಂಪೂರ್ಣ ಜಖಂ ಆಗಿದೆ.
ಅಪಘಾತದಲ್ಲಿ ಲಾರಿ ಚಾಲಕ ಮೃತಪಟ್ಟಿದ್ದು, ಕಲ್ಲಂಗಡಿ ಸಾಗಿಸುತ್ತಿದ್ದ ಟ್ರಕ್ ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.