ಜಮ್ಮುವಿನ ಅಖ್ನೂರ್ ತಾಂಡಾ ಪ್ರದೇಶದಲ್ಲಿ ಉತ್ತರ ಪ್ರದೇಶದ ಹತ್ರಾಸ್ನಿಂದ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ರಸ್ತೆಯಿಂದ ಜಾರಿ ಆಳವಾದ ಕಮರಿಗೆ ಬಿದ್ದ ಪರಿಣಾಮ 19 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ.
ಜಿಲ್ಲೆಯ ಕಾಳಿಧರ್ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ ಸುಮಾರು 150 ಅಡಿ ಆಳದ ಕಮರಿಗೆ ಉರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಹತ್ರಾಸ್ನಿಂದ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಜಮ್ಮುವಿನ ಅಖ್ನೂರ್ ತಾಂಡಾ ಬಳಿ ಅಪಘಾತಕ್ಕೀಡಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಜಮ್ಮುವಿನ ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಜಮ್ಮು-ಪೂಂಚ್ ರಾಷ್ಟ್ರೀಯ ಹೆದ್ದಾರಿಯಲ್ಲಿ (144 ಎ) ಅಖ್ನೂರ್ನ ತುಂಗಿ ಮೋರ್ಹ್ ಪ್ರದೇಶದಲ್ಲಿ ಪ್ರಯಾಣಿಕರ ಬಸ್ ಆಳವಾದ ಕಮರಿಗೆ ಬಿದ್ದಿದೆ. ಈ ಅಪಘಾತದಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಈ ಭೀಕರ ಬಸ್ ಅಪಘಾತದಲ್ಲಿ ಹಲವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಪೊಲೀಸರು ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಅಖ್ನೂರ್ ಉಪಜಿಲಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನು ಜಮ್ಮು ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ.