alex Certify BREAKING : ಮಂಡ್ಯದಲ್ಲಿ ಭೀಕರ ಅಪಘಾತ : ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ದುರ್ಮರಣ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಂಡ್ಯದಲ್ಲಿ ಭೀಕರ ಅಪಘಾತ : ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ದುರ್ಮರಣ.!

ಮಂಡ್ಯ : ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾದ ಘಟನೆ ಮಳವಳ್ಳಿ ತಾಲೂಕಿನ ಬೋಸೇಗೌಡನದೊಡ್ಡಿಯಲ್ಲಿ ನಡೆದಿದೆ.

ಮೃತರನ್ನು ಪ್ರಣವ್, ಆಕಾಶ್, ಆದರ್ಶ್ ಎಂದು ಗುರುತಿಸಲಾಗಿದೆ. ಮೃತರು ಬೆಂಗಳೂರಿನವರಾಗಿದ್ದು, ಮೈಸೂರು ಜಿಲ್ಲೆಯ ತಲಕಾಡಿಗೆ ಪ್ರವಾಸ ಹೋಗುವಾಗ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಭೀಕರ ಅಪಘಾತದಲ್ಲಿ ಮತ್ತೋರ್ವ ವಿದ್ಯಾರ್ಥಿ ಪೃಥ್ವಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...