ಉತ್ತರ ಪ್ರದೇಶ : ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ರಾಜ್ಯದ ಐವರು ಸಾವನ್ನಪ್ಪಿದ್ದಾರೆ.
ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 6 ಮಂದಿ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.
ಮೃತರನ್ನು ಲಾಡಗೇರಿ ಬಡಾವಣೆಯ ನಿವಾಸಿಗಳು ಎಂದು ಗುರುತಿಸಲಾಗಿದೆ. ಕುಂಭಮೇಳ ಮುಗಿಸಿ ಕಾಶಿಗೆ ಹೋಗುತ್ತಿದ್ದ ವೇಳೆ ಲಾರಿ-ಕ್ರೂಸರ್ ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.