ತಮಿಳುನಾಡು : ಇಲ್ಲಿನ ಪಟಾಕಿ ತಯಾರಿಕಾ ಘಟಕದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.
ರಾಸಾಯನಿಕಗಳನ್ನು ಬೆರೆಸುವ ಪ್ರಕ್ರಿಯೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದ್ದು, ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.
ಮಾಹಿತಿಯ ಮೇರೆಗೆ ವಿರುಧುನಗರ, ಸತ್ತೂರು ಮತ್ತು ಅರುಪ್ಪುಕೊಟ್ಟೈನ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.ಸದ್ಯ ಆರು ಪುರುಷರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಅವರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ. ಶವಗಳನ್ನು ಶವಪರೀಕ್ಷೆಗಾಗಿ ವಿರುಧುನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ಸಂಭವಿಸಿದ ಮೊದಲ ಪಟಾಕಿ ಅಪಘಾತ ಇದಾಗಿದೆ.
ಸಾಂದರ್ಭಿಕ ಚಿತ್ರ