alex Certify BREAKING : ಗದಗದಲ್ಲಿ ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ ಐವರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಗದಗದಲ್ಲಿ ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ ಐವರು ದುರ್ಮರಣ

ಗದಗ : ಸರ್ಕಾರಿ ಬಸ್ ಹಾಗೂ ಟಾಟಾ ಸುಮೋ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ.

ಸರ್ಕಾರಿ ಬಸ್ ಹಾಗೂ ಟಾಟಾ ಸುಮೋ ನಡುವೆ ಡಿಕ್ಕಿ ಹೊಡೆದಿದ್ದು, ಟಾಟಾ ಸುಮೋದಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು . ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.  ನರೇಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...