ನವದೆಹಲಿ : ಮಹಾಕುಂಭಮೇಳದಲ್ಲಿ ಭೀಕರ ಕಾಲ್ತುಳಿತ ದುರಂತ ಸಂಭವಿಸಿದ್ದು, ಸುಮಾರು 17 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
ಪ್ರಯಾಗ್’ರಾಜ್ ಮಹಾಕುಂಭಮೇಳದಲ್ಲಿ ನಡೆದ ಘಟನೆ ತುಂಬಾ ದುಃಖಕರವಾಗಿದೆ. ತಮ್ಮ ಕುಟುಂಬಗಳನ್ನು ಕಳೆದುಕೊಂಡ ಯಾತ್ರಾರ್ಥಿಗಳಿಗೆ ಸಂತಾಪಗಳು. ಗಾಯಗೊಂಡವರೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯದಲ್ಲಿ ತೊಡಗಿದೆ. ಈ ನಿಟ್ಟಿನಲ್ಲಿ ನಾನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ನಾನು ರಾಜ್ಯ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
प्रयागराज महाकुंभ में हुआ हादसा अत्यंत दुखद है। इसमें जिन श्रद्धालुओं ने अपने परिजनों को खोया है, उनके प्रति मेरी गहरी संवेदनाएं। इसके साथ ही मैं सभी घायलों के शीघ्र स्वस्थ होने की कामना करता हूं। स्थानीय प्रशासन पीड़ितों की हरसंभव मदद में जुटा हुआ है। इस सिलसिले में मैंने…
— Narendra Modi (@narendramodi) January 29, 2025