ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ನಲ್ಲಿ ಸೋಮವಾರ ಸೇನಾ ವಾಹನದ ಮೇಲೆ ನಡೆದ ದಾಳಿಯಲ್ಲಿ ಕನಿಷ್ಠ ಒಬ್ಬ ಭಯೋತ್ಪಾದಕ ಸಾವನ್ನಪ್ಪಿದ್ದಾನೆ ಎಂದು ಮೂಲಗಳು ತಿಳಿಸಿವೆ. ಭದ್ರತಾ ಪಡೆಗಳು ಪ್ರಸ್ತುತ ಈ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿಯಲ್ಲಿ ತೊಡಗಿವೆ.
ಬೆಳಿಗ್ಗೆ 7 ಗಂಟೆ ಸುಮಾರಿಗೆ ಬಟಾಲ್ ಪ್ರದೇಶದಲ್ಲಿ ಮೂವರು ಭಯೋತ್ಪಾದಕರು ಸೇನಾ ವಾಹನದ ಮೇಲೆ ಅನೇಕ ಸುತ್ತು ಗುಂಡು ಹಾರಿಸಿದರು. ಭದ್ರತಾ ಪಡೆಗಳು ತಕ್ಷಣವೇ ಈ ಪ್ರದೇಶವನ್ನು ಸುತ್ತುವರೆದಿದ್ದು, ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಮೂಲಗಳು ತಿಳಿಸಿವೆ.