ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ವೆಬ್ಸೈಟ್ ಪ್ರಕಾರ, ಆಧಾರ್ ಕಾರ್ಡ್ ವಿವರಗಳನ್ನು ಈಗ ಸೆಪ್ಟೆಂಬರ್ 14, 2024 ರವರೆಗೆ ನವೀಕರಿಸಬಹುದು. ಉಚಿತವಾಗಿ ‘ಆಧಾರ್ ಕಾರ್ಡ್’ ಅಪ್ಡೇಟ್ ಮಾಡುವ ಗಡುವು ಸೆ. 14 ರವರೆಗೆ ವಿಸ್ತರಣೆ ಮಾಡಲಾಗಿದೆ.
ಹತ್ತಕ್ಕೂ ಹೆಚ್ಚು ವರ್ಷಗಳಿಂದ ಆಧಾರ್ ಅನ್ನು ಅಪ್ಡೇಟ್ ಮಾಡದೇ ಇದ್ದವರು ಅದನ್ನು ಅಪ್ಡೇಟ್ ಮಾಡಬೇಕು ಎಂದು ಸರ್ಕಾರ ಸೂಚಿಸಿದೆ. ಬಹಳಷ್ಟು ಜನರು ಒಮ್ಮೆ ಆಧಾರ್ ಕಾರ್ಡ್ ಮಾಡಿಸಿದಾಗಿನಿಂದ ಅದನ್ನು ಅಪ್ಡೇಟ್ ಮಾಡಿಲ್ಲ. ನಿಮ್ಮ ಪ್ರೊಫೈಲ್ನಲ್ಲಿ ಯಾವುದೇ ಮಾಹಿತಿ ಬದಲಾವಣೆ ಇಲ್ಲದಿದ್ದರೂ ಕೂಡ ಅದನ್ನು ನಮೂದಿಸಿ ಅಪ್ಡೇಟ್ ಮಾಡಬಹುದು.
ಆನ್ಲೈನ್ನಲ್ಲಿ ಅಪ್ಡೇಟ್ ಮಾಡುವುದು ಹೇಗೆ..?
ಯುಐಡಿಎಐನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ: uidai.gov.in/
• ಈ ವೆಬ್ಸೈಟ್ನಿಂದ ಮೈ ಆಧಾರ್ ಪೋರ್ಟಲ್ಗೆ ಹೋಗಿ.
• ಇಲ್ಲಿ ಆಧಾರ್ ನಂಬರ್ ಮತ್ತು ಒಟಿಪಿ ಮೂಲಕ ಲಾಗಿನ್ ಆಗಿರಿ.
• ಅದರಲ್ಲಿ ನಿಮ್ಮ ಪ್ರೊಫೈಲ್ಗೆ ಹೋಗಿ ಮಾಹಿತಿ ವೀಕ್ಷಿಸಬಹುದು.
• ಎಲ್ಲವೂ ಸರಿ ಇದ್ದರೆ ಒಪ್ಪಿಗೆ ನೀಡಬಹುದು.