ಹಾಸನ : ಶಿರಾಡಿ ಘಾಟ್ ನಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ನೀಡಿದೆ. ಗುಡ್ಡ ಕುಸಿತದ ಹಿನ್ನೆಲೆ ಜಿಲ್ಲಾಡಳಿತ ತಾತ್ಕಾಲಿಕವಾಗಿ ರಸ್ತೆ ಸಂಚಾರ ಬಂದ್ ಮಾಡಿಸಿತ್ತು.
ಇದೀಗ ಗುಡ್ಡ ತೆರವು ಕಾರ್ಯಾಚರಣೆ ಮುಕ್ತಾಯವಾಗಿದ್ದು, ಇಂದಿನಿಂದಲೇ ಎಲ್ಲಾ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ನೀಡಿದೆ.
ರಾಜ್ಯದಲ್ಲಿ ಮಳೆಯ ಅಬ್ಬರದ ಶಿರಾಡಿ ಘಾಟ್ ನಲ್ಲಿ ಭೂ ಕುಸಿತ ಸಂಭವಿಸಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೆ ಭಾರಿ ಪ್ರಮಾಣದಲ್ಲಿ ಭೂ ಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿಕೊಂಡಿದ್ದವು. ಹಾಸನ ಜಿಲ್ಲೆಯ ಸಕಲೇಶಪುರ ವ್ಯಾಪ್ತಿಯಲ್ಲಿ ಭಾರಿ ಮಳೆಯಾದ ಹಿನ್ನೆಲೆ ಶಿರಾಡಿ ಘಾಟ್ ನ ದೊಡ್ಡತಪ್ಲೆ ಬಳಿ ಮತ್ತೆ ಭೂ ಕುಸಿತ ಸಂಭವಿಸಿತ್ತು. ಚಲಿಸುತ್ತಿದ್ದ ವಾಹನಗಳ ಮೇಲೆಯೇ ಮಣ್ಣು ಕುಸಿದು ಬಿದ್ದಿದ್ದು, ಮಣ್ಣಿನಡಿ ವಾಹನಗಳು ಸಿಲುಕಿಕೊಂಡಿದ್ದವು. ಈ ಹಿನ್ನೆಲೆ ಜಿಲ್ಲಾಡಳಿತ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿತ್ತು.