ಅಮರಾವತಿ: ಕೌಶಲ್ಯ ಅಭಿವೃದ್ಧಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಆಂಧ್ರಪ್ರದೇಶ ಹೈಕೋರ್ಟ್ ವಜಾಗೊಳಿಸಿದೆ.
ತನ್ನ ವಿರುದ್ಧ ದಾಖಲಾದ ಎಫ್ಐಆರ್ ಮತ್ತು ಅದರ ಆಧಾರದ ಮೇಲೆ ಎಸಿಬಿ ನ್ಯಾಯಾಲಯ ಹೊರಡಿಸಿದ ರಿಮಾಂಡ್ ಆದೇಶವನ್ನು ಪ್ರಶ್ನಿಸಿ ಚಂದ್ರಬಾಬು ಅರ್ಜಿ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ.
ಚಂದ್ರಬಾಬು ನಾಯ್ಡು ಪರವಾಗಿ ಸುಪ್ರೀಂ ಕೋರ್ಟ್ ವಕೀಲರಾದ ಹರೀಶ್ ಸಾಳ್ವೆ ಮತ್ತು ಸಿದ್ಧಾರ್ಥ್ ಲೂತ್ರಾ ವಾದ ಮಂಡಿಸಿದ್ದರು. ಸಿಐಡಿ ಪರವಾಗಿ ಸುಪ್ರೀಂ ಕೋರ್ಟ್ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿದ್ದರು. ಹೈಕೋರ್ಟ್ ಎರಡೂ ಪಕ್ಷಗಳ ವಾದಗಳನ್ನು ಆಲಿಸಿತು. ಚಂದ್ರಬಾಬು ನಾಯ್ಡು ಅವರ ಮನವಿಯನ್ನು ಇಂದು ತೀರ್ಪು ಪ್ರಕಟಿಸುವ ಮೂಲಕ ತಿರಸ್ಕರಿಸಲಾಗಿದೆ.
ಅದೇ ರೀತಿ ಚಂದ್ರಬಾಬು ನಾಯ್ಡು ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯವು ಸೆಪ್ಟೆಂಬರ್ 24 ರವರೆಗೆ ವಿಸ್ತರಿಸಿದೆ.ಆಂಧ್ರಪ್ರದೇಶದ ಕೌಶಲ್ಯ ಅಭಿವೃದ್ಧಿ ಹಗರಣದ ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ರಾಷ್ಟ್ರೀಯ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು ಅವರ ನ್ಯಾಯಾಂಗ ಬಂಧನವನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನ್ಯಾಯಾಲಯವು ಸೆಪ್ಟೆಂಬರ್ 22 ರಂದು ಎರಡು ದಿನಗಳವರೆಗೆ ವಿಸ್ತರಿಸಿದೆ. ನಾಯ್ಡು ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 24 ರವರೆಗೆ ವಿಸ್ತರಿಸಲಾಗಿದೆ.