ಬೆಂಗಳೂರು : ಇಂದು ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ನಿಗದಿಯಾಗಿದ್ದ ವಿಶೇಷ ಸಚಿವ ಸಂಪುಟ ಸಭೆ ರದ್ದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಇಂದು ಸಂಜೆ 5 ಗಂಟೆಗೆ ವಿಶೇಷ ಸಂಪುಟ ಸಭೆ ಕರೆದಿದ್ದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17 ಮತ್ತು ಭಾರತ್ ನ್ಯಾಯ ಸಂಹಿತಾದ ಸೆಕ್ಷನ್ 18 ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲು ಗೆಹ್ಲೋಟ್ ಅನುಮತಿ ನೀಡಿದ್ದಾರೆ.