ಬೆಂಗಳೂರು : ‘ಬರ ಪರಿಹಾರ’ ನೀಡದ ಕೇಂದ್ರ ಸರ್ಕಾರದ ವಿರುದ್ಧ ‘ರಾಜ್ಯ ಸರ್ಕಾರ’ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬರ ಪರಿಹಾರ ನೀಡದ ಕೇಂದ್ರ ಸರ್ಕಾರದ ವಿರುದ್ಧ ನಾವು ಕಾನೂನು ಸಮರಕ್ಕೆ ಮುಂದಾಗಿದ್ದೇವೆ ಎಂದು ಹೇಳಿದರು.ಬರ ಪರಿಹಾರ ಘೋಷಿಸದ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ಮಾಡಲು ನಿರ್ಧರಿಸಿದ್ದೇವೆ. ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಆರ್ಟಿಕಲ್ 32 ರಡಿ ಕೇಂದ್ರದ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದೇವೆ ಎಂದು ಹೇಳಿದರು.
ರಾಜ್ಯ ಸರ್ಕಾರ 5 ತಿಂಗಳು ಕಾದಿದೆ. ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಾಗಲೂ ಮನವಿ ಮಾಡಿದ್ದೆವು, ಆರ್ಟಿಕಲ್ 32 ರಡಿ ಕೇಂದ್ರದ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದೇವೆ . ಸುಪ್ರೀಂಕೋರ್ಟ್ ರಜೆ ಇರುವ ಕಾರಣ ಅರ್ಜಿ ವಿಚಾರಣೆ ಆಗಿಲ್ಲ. 1 ವಾರದ ರಜೆ ಮುಗಿದ ಬಳಿಕ ವಿಚಾರಣೆಗೆ ತೆಗೆದುಕೊಳ್ಳುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ. ಡಿ.19 ರಂದು ಪ್ರಧಾನಿ ಮೋದಿ ಭೇಟಿಯಾಗಿ ರಾಜ್ಯದ ಸಮಸ್ಯೆ ಹೇಳಿಕೊಂಡಿದ್ದೆವು, ಅಮಿತ್ ಶಾ ಬಳಿಯೂ ಸಮಸ್ಯೆ ಹೇಳಿಕೊಂಡಿದ್ದೆವು. ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಆದರೆ ಇದುವರೆಗೂ ಹಣ ಬಿಡುಗಡೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.