ಬೆಂಗಳೂರು : ರಾಜ್ಯದ 5,8,9, 11 ತರಗತಿಯ ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಯಾವುದೇ ಫಲಿತಾಂಶ ಪ್ರಕಟಿಸದಂತೆ ರಾಜ್ಯದ ಶಾಲೆಗಳಿಗೆ ಸೂಚನೆ ನೀಡಿದೆ.
ಹೌದು, ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾದ ಮೌಲ್ಯಾಂಕನ ಪರೀಕ್ಷೆ ಫಲಿತಾಂಶವನ್ನು ಸೋಮವಾರ ಆಯಾ ಶಾಲೆಗಳಲ್ಲಿ ಪ್ರಕಟಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿತ್ತು. 2023 -24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ವಿದ್ಯಾರ್ಥಿಗಳಿಗೆ ಕಳೆದ ಮಾರ್ಚ್ ನಲ್ಲಿ ಮೌಲ್ಯಾಂಕನ ಪರೀಕ್ಷೆ ನಡೆಸಲಾಗಿದ್ದು, ಬ್ಲಾಕ್ ಹಂತದಲ್ಲಿ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿ ಉತ್ತರ ಪತ್ರಿಕೆಗಳ ಸಹಿತ ಶಾಲಾ ವಿದ್ಯಾರ್ಥಿಗಳ ಅಂಕಗಳನ್ನು ದಾಖಲಿಸಿ ಪ್ರತಿಯನ್ನು ಆಯಾ ಶಾಲೆಗಳಿಗೆ ಕಳುಹಿಸಲಾಗಿತ್ತು.
ಇದೀಗ ರಾಜ್ಯದ 5,8,9, 11 ತರಗತಿಯ ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ರಾಜ್ಯದ 5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಅಸ್ತು ಎಂದಿತ್ತು, ನಂತರ ಹೈಕೋರ್ಟ್ ಮಾರ್ಚ್ 22 ರಂದು ನೀಡಿದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ಮೇರೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಯಾವುದೇ ಶಾಲೆ ಫಲಿತಾಂಶಗಳನ್ನು ಗಣನೆಗೆ ತೆಗೆದುಕೊಳ್ಳಬಾರದು ಮತ್ತು ಪೋಷಕರಿಗೆ ತಿಳಿಸುವ ಬದಲು ತಡೆಹಿಡಿಯಬೇಕು” ಎಂದು ಸುಪ್ರೀಂ ಕೋರ್ಟ್ ಇಂದು ಆದೇಶಿಸಿದೆ.