alex Certify BREAKING : ಬೆಂಗಳೂರಿನ ಶಾಲಾ-ಕಾಲೇಜು, ಅಂಗನವಾಡಿಗಳಿಗೆ ಇಂದು ರಜೆ ಇಲ್ಲ : ಡಿಸಿ ಜಗದೀಶ್ ಸ್ಪಷ್ಟನೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನ ಶಾಲಾ-ಕಾಲೇಜು, ಅಂಗನವಾಡಿಗಳಿಗೆ ಇಂದು ರಜೆ ಇಲ್ಲ : ಡಿಸಿ ಜಗದೀಶ್ ಸ್ಪಷ್ಟನೆ.!

ಬೆಂಗಳೂರು : ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ದಯಾನಂದ್ ಸ್ಪಷ್ಟನೆ ನೀಡಿದ್ದಾರೆ.

ಮಳೆ ಹಿನ್ನೆಲೆ ನಿನ್ನೆ ಬೆಂಗಳೂರಿನ ಶಾಲೆಗಳಿಗೆ ರಜೆ ನೀಡಲಾಗಿತ್ತು, ಇಂದು ಹವಾಮಾನ ಇಲಾಖೆ ಯಾವುದೇ ಅಲರ್ಟ್ ನೀಡಲಿಲ್ಲ. ಆದ್ದರಿಂದ ಇಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಿಲ್ಲ ಎಂದು ಜಿಲ್ಲಾಧಿಕಾರಿ ದಯಾನಂದ್ ಸ್ಪಷ್ಟನೆ ನೀಡಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...