ಮೈಸೂರು : ಈ ಬಾರಿ ಸಾಹಿತಿ ಹಂ.ಪ ನಾಗರಾಜಯ್ಯ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅ.3 ರಂದು ದಸರಾ ಉದ್ಘಾಟನೆಯಾಗಲಿದೆ. ಈ ಬಾರಿ ಸಾಹಿತಿ ಹಂ.ಪ ನಾಗರಾಜಯ್ಯ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹಂ.ಪ.ನಾಗರಾಜಯ್ಯ ಬಗ್ಗೆ ಪರಿಚಯ
ಹಂ.ಪ.ನಾಗರಾಜಯ್ಯನವರು ಕನ್ನಡ ಸಾರಸ್ವತ ಲೋಕದಲ್ಲಿ ‘ಹಂಪನಾ’ ಎಂದೇ ಚಿರಪರಿಚಿತರು. ಇವರು ಇಂದಿನ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹಂಪಸಂದ್ರ ಎಂಬ ಗ್ರಾಮದಲ್ಲಿ ಅಕ್ಟೋಬರ್ ೭, ೧೯೩೬ರಲ್ಲಿ ಜನಿಸಿದರು. ಇವರ ತಂದೆ ಶಾನುಬೋಗ ಪದ್ಮನಾಭಯ್ಯ ಮತ್ತು ತಾಯಿ ಪದ್ಮಾವತಮ್ಮನವರು.
ಹಂಪನಾ ಅವರಿಗೆಕನ್ನಡ ವಿಶ್ವವಿದ್ಯಾಲಯವು ೨೦೦೬ರಲ್ಲಿ ನಾಡೋಜ ಪ್ರಶಸ್ತಿ ನೀಡಿ ಗೌರವಿಸಿದೆ.
ಅಲ್ಲದೆ ಅವರನ್ನು ಹಲವಾರು ಪ್ರಶಸ್ತಿಗಳು ಹುಡುಕಿಕೊಂಡು ಬಂದಿವೆ. ನಾಡಿನ ಪರಮೋಚ್ಛ ಸಾಹಿತ್ಯ ದೇಗುಲವಾದ ಕನ್ನಡ ಸಾಹಿತ್ಯ ಪರಿಷತ್ತಿಗೆ ೧೯೭೮ರಿಂದ ೧೯೮೬ರ ದೀರ್ಘ ಅವಧಿಗೆ ಇವರು ಅಧ್ಯಕ್ಷರಾಗಿದ್ದರು. ಅದಕ್ಕೂ ಮುನ್ನ ೧೯೬೬ರಿಂದ ೧೯೭೪ರ ಅವಧಿಯಲ್ಲಿ ಕಾರ್ಯದರ್ಶಿಯಾಗಿಯೂ ದುಡಿದಿದ್ದರು. ತಮ್ಮ ಅಧ್ಯಕ್ಷತೆ ಅವಧಿಯಲ್ಲಿ ಕನ್ನಡದ ಎಲ್ಲ ಕ್ಷೇತ್ರಗಳಿಗೆ ಸಂಬಂಧಿಸಿದ ವಿವಿಧ ಲೇಖಕರ ಸುಮಾರು ಮುನ್ನೂರು ಮೌಲಿಕ ಪುಸ್ತಕಗಳನ್ನು ಪ್ರಕಟಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಪರಿಷತ್ತಿನ ಚಿನ್ನದಹಬ್ಬದ ನೆನಪಿಗಾಗಿ ಭವ್ಯ ಕಟ್ಟಡವನ್ನು ಕಟ್ಟಿಸಿದರು.
ಪ್ರಶಸ್ತಿಗಳು
1. ೧೯೯೩-೯೪ರ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
2. ೧೯೯೫ರ ಜಾನಪದ ಯಕ್ಷಗಾನ ಅಕಾಡೆಮಿ ಪ್ರಶಸ್ತಿ
3. ಶಿಶುಸಾಹಿತ್ಯಕ್ಕಾಗಿ ನೀಡಲಾಗುವ ರಾಷ್ಟ್ರೀಯ ಪುರಸ್ಕಾರ ೧೯೯೦ರಲ್ಲಿ
4. ೧೯೯೬ರಲ್ಲಿ ಚಾಮುಂಡರಾಯ ಪ್ರಶಸ್ತಿ
5. ೧೯೯೭ರಲ್ಲಿ ಕಾವ್ಯಾನಂದ ಪ್ರಶಸ್ತಿ
6. ೧೯೯೮ರಲ್ಲಿ ರಾಜ್ಯೋತ್ಸವ ಪ್ರಶಸ್ತಿ
7. ೨೦೦೧ರಲ್ಲಿ ಶಾಸನ ಸಾಹಿತ್ಯ ಪ್ರಶಸ್ತಿ
8. ಅತ್ತಿಮಬ್ಬೆ ಪ್ರತಿಷ್ಠಾನದ ಚಿ.ನ.ಮಂಗಳಾ ಪ್ರಶಸ್ತಿ
9. ಆಚಾರ್ಯ ಕುಂದಕುಂದ ಜ್ಞಾನಪೀಠ ಪ್ರಶಸ್ತಿ
10. ಶೀಮೊಗ್ಗೆ ನಾಗರಿಕ ಸಮುದಾಯವು ನೀಡಿದ ಸಾಹಿತ್ಯಸಿಂಧು ಮತ್ತು ಜ್ಞಾನಭಾಸ್ಕರ ಪ್ರಶಸ್ತಿಗಳು.
11. ಕರ್ನಾಟಕ ಸರ್ಕಾರದ ಪಂಪ ಪ್ರಶಸ್ತಿ
12. ಶಾಸ್ತ್ರೀಯ ಕನ್ನಡಕ್ಕೆ ನೀಡಿದ ಸೇವೆಯನ್ನು ಪರಿಗಣಿಸಿ ರಾಷ್ಟ್ರಪತಿ ಮನ್ನಣೆ