alex Certify BREAKING : ಬೆಂಗಳೂರಿನಲ್ಲಿ ಏರೋನಿಕ್ಸ್ ಕಂಪನಿ CEO, MD ಬರ್ಬರ ಹತ್ಯೆ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಏರೋನಿಕ್ಸ್ ಕಂಪನಿ CEO, MD ಬರ್ಬರ ಹತ್ಯೆ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು : ಬೆಂಗಳೂರಿನ ಅಮೃತಹಳ್ಳಿಯಲ್ಲಿ ಏರೋನಿಕ್ಸ್ ಕಂಪನಿ ಸಿಇಒ, ಎಂ.ಡಿ. ಬರ್ಬರ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ತುಮಕೂರು ಜಿಲ್ಲೆಯ ಕುಣಿಗಲ್ ನಲ್ಲಿ ಫಿಲೆಕ್ಸ್, ವಿನಯ್ ರೆಡ್ಡಿ, ಶಿವು ಬಂಧಿತ ಆರೋಪಿಗಳು, ಸದ್ಯಕ್ಕೆ ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಬೆಂಗಳೂರಿನ ಪಂಪಾ ಬಡಾವಣೆಯಲ್ಲಿ ಏರೋನಿಕ್ಸ್ ಇಂಟರ್ನೆಟ್ ಕಂಪನಿಯ MD  ಫಣೀಂದ್ರ ಹಾಗೂ CEO ವಿನಯ್ ಕುಮಾರ್ ಎಂಬುವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಕಂಪನಿಯ ಮಾಜಿ ಉದ್ಯೋಗಿ ಫೆಲಿಕ್ಸ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಕಂಪನಿ ಬಿಟ್ಟು ಸ್ವಂತ ಉದ್ಯೋಗ ಶುರು ಮಾಡಿದ ಫೆಲಿಕ್ಸ್ ಈ ಕೃತ್ಯ ಎಸಗಿದ್ದು, ವೈಯಕ್ತಿಕ ದ್ವೇಷದ ಹಿನ್ನೆಲೆ ಕೊಲೆ ಮಾಡಿದ್ದಾನೆ ಎಂದು ಶಂಕಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...