alex Certify BREAKING : ಬೆಳಗಾವಿಯಲ್ಲಿ ಘೋರ ದುರಂತ : `ವಿದ್ಯುತ್ ಶಾಕ್’ ನಿಂದ ಮೂವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಳಗಾವಿಯಲ್ಲಿ ಘೋರ ದುರಂತ : `ವಿದ್ಯುತ್ ಶಾಕ್’ ನಿಂದ ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ವಿದ್ಯುತ್ ಪ್ರವಹಿಸಿ ದಂಪತಿ ಹಾಗೂ ಮೊಮ್ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ವಿದ್ಯುತ್ ಪ್ರವಹಿಸಿ,ಈರಪ್ಪ ರಾಠೋಡ (53), ಶಾಂತವ್ವ ರಾಠೋಡ (45) ಹಾಗೂ ಮೊಮ್ಮಗಳು ಅನ್ನಪೂರ್ಣ (13) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿರ್ಮಾಣ ಹಂತದ ಮನೆಗೆ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದ ಈರಪ್ಪ, ಮೋಟಾರ್ ಆನ್ ಮಾಡಲು ಹೋಗಿದ್ದ ವೇಳೆ ವಿದ್ಯುತ್ ಶಾಕ್ ನಿಂದ ಕೆಳಗೆ ಬಿದ್ದು ಒದ್ದಾಡುತ್ತಿದ್ದ ವೇಳೆ ಪತಿ ರಕ್ಷಣೆಗೆ ಹೋದ ಶಾಂತವ್ವ ಮತ್ತು ಮೊಮ್ಮಗಳು ವಿದ್ಯುತ್ ಶಾಕ್ ನಿಂದ ಮೃತಪಟ್ಟಿದ್ದಾರೆ. ಮೃತರು ರಾಮದುರ್ಗ ತಾಲೂಕಿನ ಅರೆಬೆಂಚಿ ತಾಂಡದ ನಿವಾಸಿಗಳು ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...