alex Certify BREAKING : ತುಮಕೂರಿನಲ್ಲಿ ಘೋರ ದುರಂತ : ಕಾರು ಕೆರೆಗೆ ಬಿದ್ದು ಮೂವರು ಜಲಸಮಾಧಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತುಮಕೂರಿನಲ್ಲಿ ಘೋರ ದುರಂತ : ಕಾರು ಕೆರೆಗೆ ಬಿದ್ದು ಮೂವರು ಜಲಸಮಾಧಿ

ತುಮಕೂರು : ತುಮಕೂರು ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೆರೆಗೆ ಕಾರು ಬಿದ್ದು ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣದ ಬಳಿಯಿರುವ ರಾಮಲಿಂಗಪುರ ಕೆರೆಯಲ್ಲಿ ದುರ್ಘಟನೆ ನಡೆದಿದ್ದು, ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ದೊಡ್ಡಣ್ಣ, ಸಣ್ಣಮ್ಮ, ಯಮುನಾ ಎಂದು ಗುರುತಿಸಲಾಗಿದ್ದು, ಪ್ರವೀಣ್ ಎಂಬುವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರೆಲ್ಲರೂ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ವೀರಾಪುರ ಗ್ರಾಮದವರು, ಇಂದು ಬೆಳಗ್ಗೆ ಕಾರಿನಲ್ಲಿ ಧರ್ಮಸ್ಥಳಕ್ಕೆ ಹೊರಟಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದಿದೆ. ಈ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...