ಬೆಂಗಳೂರು : ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಎಫ್ ಐ ಆರ್ ದಾಖಲಾಗಿದೆ.
ಜೈಲು ಅಧೀಕ್ಷರ ದೂರು ಆರಿಸಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಎಫ್ ಐ ಆರ್ ದಾಖಲಾಗಿದೆ.
ಜೈಲು ಸೂಪರಿಂಟೆಂಡೆಂಟ್ ಕೊಟ್ಟ ದೂರಿನ ಮೇಲೆ ಸದ್ಯ ಮೂರು FIRಗಳು ದಾಖಲಾಗಿದೆ. ಸಿಗರೇಟ್ ಕೊಟ್ಟಿದ್ದಕ್ಕೆ ಒಂದು FIR, ಜೈಲಿನಲ್ಲಿ ವಿಡಿಯೋ ಮಾಡ್ಕೊಂಡು ವೈರಲ್ ಮಾಡಿದ್ದಕ್ಕೆ ಮತ್ತೊಂದು ಹಾಗೂ ಸಿಸಿಬಿ ಪೊಲೀಸರ ದಾಳಿ ವೇಳೆ ಕೆಲವು ಬಾಕ್ಸ್‌ಗಳನ್ನು ತಗೊಂಡು ಹೋಗಿದ್ದಕ್ಕೆ ಒಟ್ಟು ಮೂರು ಪ್ರತ್ಯೇಕ ಕೇಸ್‌ಗಳನ್ನು ಪರಪ್ಪನ ಅಗ್ರಹಾರದಲ್ಲಿ ದಾಖಲು ಮಾಡಲಾಗಿದೆ. ಮೂರು ಎಫ್ ಐ ಆರ್ ಗಳಲ್ಲೂ ನಟ ದರ್ಶನ್ ಆರೋಪಿ ಎಂದು ಹೆಸರಿಸಲಾಗಿದ್ದು, ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.