ಮೈಸೂರು : ಮೈಸೂರು ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಇಂದು ಮುಂಜಾನೆ 4.30 ರ ಸುಮಾರಿಗೆ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.