![](https://kannadadunia.com/wp-content/uploads/2023/01/accident.1.38550.jpg)
ತುಮಕೂರು : ತುಮಕೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಜೋಡಗಟ್ಟಿ ಬಳಿ ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರನ್ನು ನರಸಿಂಹ ಮೂರ್ತಿ (21), ಅನಿಲ್ ಕುಮಾರ್ (21) ಹಾಗೂ ಕಾವ್ಯ (19) ಎಂದು ಗುರುತಿಸಲಾಗಿದೆ.
ಆದಿಚುಂಚನಗಿರಿ ಮಠಕ್ಕೆ ಬೈಕ್‌ನಲ್ಲಿ ತೆರಳಿ ವಾಪಸ್ಸಾಗುತ್ತಿದ್ದಾಗ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.