ಬೆಂಗಳೂರು : ಬೆಂಗಳೂರಲ್ಲಿ ಮತ್ತೆ ಮೂವರು ಪಾಕಿಸ್ತಾನಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೂವರನ್ನು ಬೆಂಗಳೂರಿನ ಜಿಗಣಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ 3-4 ದಿನಗಳಲ್ಲಿ ಐದಕ್ಕೂ ಹೆಚ್ಚು ಪಾಕಿಸ್ತಾನದ ಪ್ರಜೆಗಳನ್ನು ಬಂಧಿಸಿದಂತಾಗಿದೆ. ಕಳೆದ ಸೋಮವಾರ ಜಿಗಣಿ ಬಳಿ ನಾಲ್ವರು ಪಾಕ್ ಪ್ರಜೆಗಳನ್ನು ಬಂಧಿಸಲಾಗಿತ್ತು. ಬಂಧಿತರನ್ನು ವಿಚಾರಣೆ ನಡೆಸಿದಾಗ ಒಟ್ಟು 15 ಮಂದಿ ಭಾರತಕ್ಕೆ ನುಸುಳಿರುವುದು ಬಯಲಾಗಿದೆ.
ಕಳೆದ 3-4 ದಿನದ ಹಿಂದೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ರಾತ್ರಿ ದಾಳಿ ನಡೆಸಿ, ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ವರು ವಿದೇಶಿ ಪ್ರಜೆಗಳನ್ನು ಬಂಧಿಸಿದ್ದರು.