ಬೆಂಗಳೂರು : ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಿಖಿಲ್ ಕುಮಾರಸ್ವಾಮಿ ನಿವಾಸದ ಮೇಲೂ ಅರಣ್ಯಾಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನಲ್ಲಿರುವ ನಿಖಿಲ್ ಕುಮಾರಸ್ವಾಮಿ ನಿವಾಸಕ್ಕೆ ಅರಣ್ಯಾಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ನಾಲ್ವರು ಅಧಿಕಾರಿಗಳ ತಂಡ ಧಾವಿಸಿ ಪರಿಶೀಲನೆ ನಡೆಸಿದ್ದು, ಮನೆಯಲ್ಲಿ ಕುಮಾರಸ್ವಾಮಿ ಹಾಗೂ ನಿಖಿಲ್ ಇಬ್ಬರೂ ಇರಲಿಲ್ಲ ಎಂದು ತಿಳಿದು ಬಂದಿದೆ.
ರಾಜ್ಯದಲ್ಲಿ ಹುಲಿ ಉಗುರು, ಚರ್ಮ ಧರಿಸಿದ್ದವರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಆಗ್ರಹಗಳು ಕೇಳಿ ಬಂದಿವೆ. ವನ್ಯ ಜೀವಿ ಚರ್ಮ, ಉಗುರು ಇನ್ನಿತರ ದೇಹದ ಭಾಗಗಳ ಬಳಕೆ, ಸಾಗಾಣೆ, ಸಂಗ್ರಹಿಸಿ ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಕಾನೂನು ಎಲ್ಲರಿಗೂ ಸಮಾನವಾಗಿದೆ. ಅಪರಾಧ ಸಾಬೀತಾದರೆ ಅರಣ್ಯ ಇಲಾಖೆ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.