alex Certify BREAKING : ಜಮ್ಮು-ಕಾಶ್ಮೀರದಲ್ಲಿ ಬಿಗಿ ಭದ್ರತೆ : ಮೆಹಬೂಬಾ ಮುಫ್ತಿ ಸೇರಿ ಹಲವರಿಗೆ ಗೃಹ ಬಂಧನ |Article 370 verdict | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜಮ್ಮು-ಕಾಶ್ಮೀರದಲ್ಲಿ ಬಿಗಿ ಭದ್ರತೆ : ಮೆಹಬೂಬಾ ಮುಫ್ತಿ ಸೇರಿ ಹಲವರಿಗೆ ಗೃಹ ಬಂಧನ |Article 370 verdict

ಜಮ್ಮು ಮತ್ತು ಕಾಶ್ಮೀರದಿಂದ 370ನೇ ವಿಧಿಯನ್ನು ತೆಗೆದುಹಾಕುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಲಿದೆ. ಸುಪ್ರೀಂ ಕೋರ್ಟ್ ತೀರ್ಪಿಗೂ ಮುನ್ನ ಜಮ್ಮು-ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆ ಹೆಚ್ಚಿಸಲಾಗಿದೆ.

ಕೆಲವೇ ಕ್ಷಣದಲ್ಲಿ 370ನೇ ವಿಧಿ ಬಗ್ಗೆ ‘ಸುಪ್ರೀಂ’ ತೀರ್ಪು ಪ್ರಕಟವಾಗಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಮ್ಮು ಕಾಶ್ಮೀರದಲ್ಲಿ ಮೆಹಬೂಬಾ ಮುಫ್ತಿಗೆ ಗೃಹ ಬಂಧನಕ್ಕೆ ಒಪ್ಪಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಮಾಜಿ ಸಿಎಂ ಗಳಾದ ಮೆಹಬೂಬಾ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಸೇರಿದಂತೆ ಹಿರಿಯ ರಾಜಕೀಯ ನಾಯಕರನ್ನು ಪೊಲೀಸರು ಗೃಹಬಂಧನದಲ್ಲಿರಿಸಿದ್ದಾರೆ ಎಂದು ತಿಳಿದು ಬಂದಿದೆ.
ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ನ್ಯಾಯಪೀಠವು 16 ದಿನಗಳ ವಿಚಾರಣೆಯ ನಂತರ ಸೆಪ್ಟೆಂಬರ್ 5 ರಂದು ಪ್ರಕರಣದ ತೀರ್ಪನ್ನು ಕಾಯ್ದಿರಿಸಿತು. ಇಂದಿಗೆ ಕಾಯ್ದಿರಿಸಿದ್ದಂತ ತೀರ್ಪನ್ನು ಕೆಲವೇ ಕ್ಷಣದಲ್ಲಿ ಪ್ರಕಟಗೊಳಿಸಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...