ಚಿತ್ರದುರ್ಗ : ಶವ ಸಾಗಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ಮೂವರು ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿ ರಾ.ಹೆದ್ದಾರಿ 150 ರಲ್ಲಿ ಈ ದುರಂತ ನಡೆದಿದೆ. ಶವ ಸಾಗಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ಕಾರು ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುರೇಶ್, ಮಲ್ಲಿಕಾರ್ಜುನ, ಭೂಮಿಕಾ ಎಂಬುವವರು ಸ್ಥಳದಲ್ಲೇ ಮೃತಪಟ್ಟರೆ, ನಾಲ್ವರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಯಾನ್ಸರ್ ನಿಂದ ಬಳಲುತ್ತಿದ್ದ ವೃದ್ದೆಯೊಬ್ಬರು ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಅವರ ಶವವನ್ನು ವೃದ್ದೆಯ ಕುಟುಂಬಸ್ಥರು ಖಾಸಗಿ ವಾಹನದಲ್ಲಿ ಊರಿಗೆ ತೆಗೆದುಕೊಂಡು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.