ನವದೆಹಲಿ : ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಾಲ್ವರನ್ನು CBI ಪೊಲೀಸರು ಬಂಧಿಸಿದ್ದಾರೆ.
ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕರಾದ ವಿಪಿನ್ ಜೈನ್ ಮತ್ತು ಪೊರ್ಮಿಲ್ ಜೈನ್ , ವೈಷ್ಣವಿ ಡೈರಿಯ ( ಪೊನಂಬಾಕ್ಕಂ) ಸಿಇಒ ಅಪೂರ್ವ ವಿನಯ್ ಕಾಂತಾ ಚಾವ್ಡಾ ಮತ್ತು ಎಆರ್ ಡೈರಿ ಎಂಡಿ ರಾಜು ರಾಜಶೇಖರನ್ ಅವರನ್ನು CBI ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಅಪರಾಧ ಸಂಖ್ಯೆ 470/24 ರ ಅಡಿಯಲ್ಲಿ ಬಂಧಿಸಿ ತಿರುಪತಿ ಕೋರ್ಟ್ ಗೆ ಹಾಜರುಪಡಿಸಲಾಗಿದೆ. ತನಿಖೆಯಲ್ಲಿ ತುಪ್ಪ ಪೂರೈಕೆಯಲ್ಲಿ ಪಾಲಿಸಬೇಕಾದ ನಿಯಮಗಳು ಉಲ್ಲಂಘನೆಯಾಗಿರುವುದು ಬೆಳಕಿಗೆ ಬಂದಿದೆ.
ಹಿಂದಿನ ವೈಎಸ್ಆರ್ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಆರೋಪಿಸಿದ್ದರು. ನಂತರ ವಿವಾದ ಭುಗಿಲೆದ್ದಿತ್ತು, ಈ ವಿಚಾರ ಕೋಟ್ಯಾಂತರ ಭಕ್ತರ ಆಕ್ರೋಶಕ್ಕೆ ಕಾರಣವಾಗಿತ್ತು.