ನವದೆಹಲಿ: ರಾಜ್ಯಸಭೆಯಿಂದ ಟಿಎಂಸಿ ಸಂಸದ ಡೆರಕ್ ಒಬ್ರಿಯಾನ್ ಅಮಾನತುಗೊಳಿಸಲಾಗಿದೆ.
ರಾಜ್ಯಸಭೆಯ ಬಾವಿಗಿಳಿದು ಪ್ರತಿಭಟನೆ ಮಾಡಿರುವ ಹಿನ್ನೆಲೆ ಟಿಎಂಸಿ ಸಂಸದ ಡರೆಕ್ ಒಬ್ರಿಯಾ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಲೋಕಸಭಾ ಭದ್ರತಾ ಉಲ್ಲಂಘನೆ ಘಟನೆಗೆ ಸಂಬಂಧಿಸಿದಂತೆ ಸದನದ ಅಧ್ಯಕ್ಷರೊಂದಿಗೆ ಮುಖಾಮುಖಿಯಾದ ನಂತರ ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರಿಯಾನ್ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ. ವಿಪಕ್ಷಗಳಿಂದ ತೀವ್ರ ಗದ್ದಲ ಉಂಟಾದ ಹಿನ್ನೆಲೆ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.