ಬೆಂಗಳೂರು : ರಾಜ್ಯದಲ್ಲಿ ಇಂದು 104 ಜನರಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಇಂದು 104 ಜನರಿಗೆ ಕೊರೊನಾ ಸೋಂಕು ಧೃಡವಾಗಿದೆ. ಬೆಂಗಳೂರಿನಲ್ಲಿ ಇಂದು 85 ಜನರಿಗೆ ಸೋಂಕು ತಗುಲಿದೆ. ಈ ಮೂಲಕ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 234 ಕ್ಕೆ ಏರಿದೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 271 ಕ್ಕೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 8 ಮಂದಿ ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಯಾವುದೇ ಕೋವಿಡ್ ಸಾವಿನ ಬಗ್ಗೆ ವರದಿಯಾಗಿಲ್ಲ, ರಾಜ್ಯದಲ್ಲಿ ಸದ್ಯ ಪಾಸಿಟಿವಿಟಿ ದರ ಶೇ.5.93 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.