ಬೆಂಗಳೂರು: 15ನೇ ಆವೃತ್ತಿಯ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ 2025ಇಂದಿನಿಂದ ಶುರುವಾಗಿದ್ದು. ಕೇಂದ್ರ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ.
ಐದು ದಿನಗಳ ಕಾಲ ನಡೆಯಲಿರುವ ಏರ್ ಶೋ ಗೆ ಮೊದಲ ದಿನವೇ ಬೆಂಗಳೂರಿಗರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಏರ್ ಶೋ ನಡೆಯುತ್ತಿರುವ ಸ್ಥಳದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಬೆಳ್ಳಂಬೆಳಗ್ಗೆಯೇ ವಾಹನ ಸವಾರರು ಪರದಾಡುವಂತಾಗಿದೆ.
ಬೆಂಗಳೂರಿನಲ್ಲಿ ಇಂದಿನಿಂದ ಏರ್ ಶೋ ನಡೆಯಲಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಚಾಲನೆ ನೀಡಿದ್ದಾರೆ. ಯಲಹಂಕ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಇಂದಿನಿಂದ (ಫೆಬ್ರವರಿ 10) 14 ರವರೆಗೆ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ ಶೋ ನಡೆಯಲಿದೆ. ಬಾನಂಗಳದಲ್ಲಿ ಲೋಹದ ಹಕ್ಕಿಗಳ ಪ್ರದರ್ಶನ ನಡೆಯಲಿದ್ದು, ನೋಡುಗರನ್ನು ಮೋಡಿ ಮಾಡಲಿದೆ.