ಕಾರವಾರ : ಜಲಪಾತದಲ್ಲಿ ಕಾಲುಜಾರಿ ಬಿದ್ದು ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಸಿದ್ದಾಪುರದ ನಿಲ್ಕುಂದ ಸಮೀಪದ ವಾಟೆಹೊಳೆ ಫಾಲ್ಸ್ ನಲ್ಲಿ ನಡೆದಿದೆ.
ಜಲಪಾತಕ್ಕೆ ಆರು ಮಂದಿ ಯುವಕರು ತೆರಳಿದ್ದರು. ಈ ಪೈಕಿ ಶಿರಸಿ ಮೂಲದ ಸುಹಾಸ್ ಶೆಟ್ಟಿ (22) ಅಕ್ಷಯ್ ಭಟ್ (22) ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಶೋಧ ಕಾರ್ಯ ನಡೆಸಿ ಮೃತದೇಹವನ್ನು ಹೊರಕ್ಕೆ ತೆಗೆದಿದೆ.