ಮಂಡ್ಯ : ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವತಿಯರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ
ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.
ಮುತ್ತತ್ತಿಗೆ ದೇವರ ಕಾರ್ಯಕ್ಕೆಂದು ಬಂದಿದ್ದ ಇಬ್ಬರು ಯುವತಿಯರು ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿ ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು 19 ವರ್ಷದ ನದೀಯಾ, ಶೋಭಾ (23 ) ಎಂದು ಗುರುತಿಸಲಾಗಿದೆ. ಮೃತರು ಕನಕಪುರ ಮೂಲದವರು ಎಂದು ತಿಳಿದು ಬಂದಿದೆ.
ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.