ತುಮಕೂರು : ಟ್ರ್ಯಾಕ್ಟರ್ ಹರಿದು 5 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ವರುಣ್ (5) ಎಂದು ಗುರುತಿಸಲಾಗಿದೆ. ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಮಣ್ಣು ತುಂಬಿದ್ದ ಟ್ರ್ಯಾಕ್ಟರ್ ಹರಿದಿದೆ. ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ವೈ .ಎನ್ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.