ದಾವಣಗೆರೆ : ಕೆರೆಗೆ ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ಲಕ್ಷ್ಮೀಸಾಗರ ಹಾಗೂ ದಿಗ್ಗೇನಹಳ್ಳಿಯಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಲಕ್ಷ್ಮೀಸಾಗರ ಹಾಗೂ ದಿಗ್ಗೇನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ.
ಕೆರೆಗೆ ಬಟ್ಟೆ ತೊಳೆಯಲು ಹೋಗಿದ್ದಂತಹ ಮೂವರು ಮಹಿಳೆಯರು ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.
ಚನ್ನಗಿರಿ ಅಗ್ನಿಶಾಮಕ ಸಿಬ್ಬಂದಿ ಮೃತ ಮಹಿಳೆಯರ ಶವಗಳನ್ನು ಮೇಲಕ್ಕೆತ್ತಿದ್ದಾರೆ. ಮೃತರನ್ನು ದೀಪಾ (28) ಚಂದನಾ (19) ದಿವ್ಯಾ (26) ಎಂದು ಗುರುತಿಸಲಾಗಿದೆ.ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.