ಧಾರವಾಡ : ಧಾರವಾಡದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನಿರ್ಮಾಣ ಹಂತದ ಕಾರ್ಖಾನೆ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ.
ಜಿಲ್ಲೆಯ ಕಲಘಟಗಿ ತಾಲೂಕಿನ ಕಾಡಕೊಪ್ಪ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ನಿನ್ನೆ ಸುರಿದ ಭಾರಿ ಮಳೆಗೆ ಗೋಡೆ ಕುಸಿದಿದೆ ಎಂದು ತಿಳಿದು ಬಂದಿದೆ.
ಮೃತರನ್ನು ದಾವೂದ್ ಸವಣೂರು (52)ರಫಿಕಸಾಬ್ ಚನ್ನಾಪುರ (50) ಎಂದು ಗುರುತಿಸಲಾಗಿದೆ. ಮಹಾಂತೇಶ ಎಂಬುವವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ನಿನ್ನೆ ಸುರಿದ ಭಾರಿ ಮಳೆಗೆ ನಿರ್ಮಾಣ ಹಂತದ ಗೋಡೆ ಕುಸಿದಿದೆ. ಪರಿಣಾಮ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಗೋಡೆಯ ಅವೇಶಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ .