ಮುಂಬೈ: ಮಹಾರಾಷ್ಟ್ರದ ಜಲಗಾಂವ್ ನಲ್ಲಿ ಭೀಕರ ದುರಂತ ಸಂಭವಿಸಿದೆ. ಪುಷ್ಪಕ್ ಎಕ್ಸ್ಪ್ರೆಸ್ ರೈಲಿಗೆ ಬೆಂಕಿ ತಗುಲಿದ್ದು, ನಂತರ ಜೀವ ಭಯದಿಂದ ಹಾರುವ ಪ್ರಯತ್ನದಲ್ಲಿ 8 ಜನ ಸಾವನ್ನಪ್ಪಿದ್ದಾರೆ.
ದುರಂತದಲ್ಲಿ 8 ಪ್ರಯಾಣಿಕರು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಜಲ್ಗಾಂವ್ನ ಪಚೋರಾ ರೈಲು ನಿಲ್ದಾಣದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, ಪುಷ್ಪಕ್ ಎಕ್ಸ್ ಪ್ರೆಸ್ನಲ್ಲಿ ಬೆಂಕಿ ಕಾಣಿಸಿಕೊಂಡ ವದಂತಿಯ ನಂತರ ಅವ್ಯವಸ್ಥೆ ಉಂಟಾಯಿತು. ಭಯಭೀತರಾದ ಪ್ರಯಾಣಿಕರು ತಮ್ಮ ಜೀವಕ್ಕೆ ಹೆದರಿ ಚಲಿಸುವ ರೈಲಿನಿಂದ ಜಿಗಿದಿದ್ದಾರೆ. ಪಕ್ಕದ ಟ್ರ್ಯಾಕ್ ಗೆ ಜಿಗಿದಾಗ ಮತ್ತೊಂದು ರೈಲು ಹರಿದು ಅನೇಕರು ಸಾವನ್ನಪ್ಪಿದ್ದಾರೆ.
ಪುಷ್ಪಕ್ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚೈನ್ ಏಳೆದು ರೈಲನ್ನು ನಿಲ್ಲಿಸಲಾಗಿದೆ. ಈ ವೇಳೆ ರೈಲಿನಿಂದ ಅನೇಕ ಪ್ರಯಾಣಿಕರು ಕೆಳಗೆ ಜಿಗಿದಿದ್ದಾರೆ. ಕರ್ನಾಟಕ ಎಕ್ಸ್ ಪ್ರೆಸ್ ರೈಲು ಬರುತ್ತಿರುವುದನ್ನು ತಿಳಿಯದೇ ಟ್ರ್ಯಾಕ್ ಮೇಲೆ ನಿಂತಿದ್ದು, ಮತ್ತೊಂದು ರೈಲು ಡಿಕ್ಕಿಯಾಗಿ ದುರಂತ ಸಂಭವಿಸಿದೆ. ರೈಲು ಹರಿದು 8 ಜನ ಸಾವನ್ನಪ್ಪಿದ್ದಾರೆ. 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
Maharashtra | At least 8 passengers of Pushpak Express were hit by Karnataka Express coming from the other side. The passengers have suffered serious injuries. More details awaited. https://t.co/EN1fvJz2j4
— ANI (@ANI) January 22, 2025