ಬೆಂಗಳೂರು :’ಟಾಕ್ಸಿಕ್’ ಚಿತ್ರತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ಮರ ಕಡಿದ ಆರೋಪದಡಿ ‘FIR’ ದಾಖಲಾಗಿದೆ.
ನಟ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ಈ ವೇಳೆ ಚಿತ್ರ ತಂಡಕ್ಕೆ ಸಂಕಷ್ಟ ಎದುರಾಗಿದೆ. ಮರ ಕಡಿದ ಆರೋಪದಡಿ ಎಫ್ ಐ ಆರ್ ದಾಖಲಾಗಿದೆ.ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶದ ಮೇರೆಗೆ ಕೆವಿಎನ್ ಸಂಸ್ಥೆ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್ ಎಂಟಿ ಜನರಲ್ ಮ್ಯಾನೇಜರ್ ವಿರುದ್ಧ ಅರಣ್ಯ ಕಾಯಿದೆಯಡಿ ಎಫ್ ಐ ಆರ್ ದಾಖಲಾಗಿದೆ.
ಕ್ರಮಕ್ಕೆ ಸೂಚನೆ ನೀಡಿದ್ದ ಈಶ್ವರ್ ಖಂಡ್ರೆ
ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಇತ್ತೀಚೆಗೆ ಹೇಳಿದ್ದರು.