ಹಾವೇರಿ : ಅಣ್ಣನ ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಮೈದುನ ಪರಾರಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ.
ಯಳ್ಳೂರು ಗ್ರಾಮದ ಕುಮಾರ್ ಗೌಡ ಎಂಬಾತ ಸ್ವಂತ ಅಣ್ಣನ ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಗೀತಾ, ಅಕುಲ್ (10) ಹಾಗೂ ಅಂಕಿತಾ (7) ಮೃತ ದುರ್ದೈವಿಗಳು. ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.