ಬೆಂಗಳೂರು : ನಟ ದರ್ಶನ್ ಗೆ ಸಂಕಷ್ಟ ಎದುರಾಗಿದ್ದು, ಡಿ ಬಾಸ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.
ನಟ ದರ್ಶನ್ ಗೆ ಹೆಣ್ಣು ಮಕ್ಕಳಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಒಕ್ಕಲಿಗರ ಗೌಡತಿಯರ ಸಂಘದಿಂದ ದೂರು ದಾಖಲಾಗಿದೆ. ಜಯಶ್ರೀ ಎಂಬುವವರು ಕಾವೇರಿ ಭವನದ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಇವತ್ತು ಇವಳು ಇರ್ತಾಳೆ , ನಾಳೆ ಅವಳು ಇರ್ತಾಳೆ ಎಂದು ಹೇಳುವ ಮೂಲಕ ನಟ ದರ್ಶನ್ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ, ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ದೂರು ನೀಡಿದ್ದಾರೆ.
ಇತ್ತೀಚೆಗೆ ದರ್ಶನ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷಗಳನ್ನು ಪೂರೈಸಿದ ಬೆನ್ನಲ್ಲೇ ಬೆಳ್ಳಿಪರ್ವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆ ಮೇಲೆ ದರ್ಶನ್ ತಮ್ಮ ವೃತ್ತಿ ಬದುಕಿನ ಬಗ್ಗೆ ಮಾತಾಡುವಾಗ ವೈಯಕ್ತಿಕ ವಿಚಾರದ ಬಗ್ಗೆ ಮಾತಾಡಿದ್ದರು.
ಕಷ್ಟಪಟ್ಟಾಗ ಮಾತುಗಳು ಕಹಿಯಾಗಿರುತ್ತೆ. ಅದು ಕೆಲವರಿಗೆ ಹಿಡಿಸಲ್ಲ. ಫ್ಯಾಮಿಲಿ ಸಮಸ್ಯೆಗಳು, ಎಲ್ಲ ಸಮಸ್ಯೆಗಳನ್ನು ಪಕ್ಕಕ್ಕೆ ಇಡುತ್ತೇನೆ. ನನ್ನ ಸೆಲೆಬ್ರಿಟಿಗಳು, ನನ್ನ ಕೆಲಸ ಮುಖ್ಯ, ಬೇರೆಯದಕ್ಕೆ ತಲೆಕೆಡಿಸಿಕೊಳ್ಳಲ್ಲ. ಇವತ್ತು ಇವಳು ಇರ್ತಾಳೆ , ನಾಳೆ ಅವಳು ಇರ್ತಾಳೆ ನಾನ್ಯಾಕೆ ಇವರ ಬಗ್ಗೆ ತಲೆ ಕೆಡಿಸಿಕೊಳ್ಳಲಿ. ನನಗೆ ನನ್ನ ಕೆಲಸ ಅಷ್ಟೆ ಮುಖ್ಯ” ಎಂದು ನಟ ದರ್ಶನ್ ಹೇಳಿದ್ದರು.