ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು, ಬೆಂಗಳೂರಿನ ಅಮೃತಹಳ್ಳಿ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿದೆ.
50 ಕೋಟಿಗೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ಎಂಬುವವರು ದೂರು ನೀಡಿದ್ದರು.
2019 ರ ಮಂಡ್ಯ ಲೋಕಸಭಾ ಚುನಾವಣೆ ವೇಳೆ ತಕ್ಷಣಕ್ಕೆ 50 ಕೋಟಿ ಹಣ ನೀಡುವಂತೆ ಒತ್ತಾಯಿಸಿದ್ದರು. ಹಣ ಕೊಡಲು ನಿರಾಕರಿಸಿದ ಹಿನ್ನೆಲೆ ನನ್ನ ಉದ್ಯಮ ಹಾಗೂ ನನ್ನ ಜೀವಕ್ಕೆ ಸಂಚಕಾರ ತರುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ವಿಜಯ್ ಟಾಟಾ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿದೆ.