ಬೆಂಗಳೂರು : ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದ್ದು, 4 ನೇ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಯುವತಿಯೊಬ್ಬಳು ಸಿಐಡಿ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದಾಳೆ. ಪ್ರಜ್ವಲ್ ರೇವಣ್ಣ ನನಗೆ ಬೆತ್ತಲಾಗುವಂತೆ ಒತ್ತಾಯಿಸಿ ಬೆದರಿಕೆ ಹಾಕಿದ್ದನು ಎಂದು ದೂರು ನೀಡಿದ್ದಾಳೆ.
ನನಗೆ ವಿಡಿಯೋ ಕಾಲ್ ಮಾಡಿ ಬೆತ್ತಲಾಗುವಂತೆ ಒತ್ತಾಯಿಸುತ್ತಿದ್ದನು. ವಿವಸ್ತ್ರವಾಗಲು ಒಪ್ಪದಿದ್ದಾಗ ನಿನ್ನ ವಿಡಿಯೋ ಸೇವ್ ಮಾಡಿಕೊಂಡಿದ್ದೇನೆ, ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ.
ಹೊಳೆನರಸೀಪುರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಎದುರಾಗಿದ್ದು, ಜಾಮೀನು ಅರ್ಜಿ ವಜಾಗೊಳಿಸಿ ಜನಪ್ರತಿನಿಧಿಗಳ ಕೋರ್ಟ್ ನಿನ್ನೆ ಆದೇಶ ಹೊರಡಿಸಿದೆ. ಮೊದಲನೇ ಹೊಳೆನರಸೀಪುರ ಪ್ರಕರಣದಲ್ಲಿ ಜಾಮೀನು ಕೋರಿದ್ದ ಪ್ರಜ್ವಲ್ ಅರ್ಜಿ ವಜಾಗೊಂಡಿದ್ದು, ವಿಶೇಷ ಕೋರ್ಟ್ ನ ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದರು.