ಜೈಪುರ: ಜೈಪುರ-ಅಜ್ಮೀರ್ ಹೆದ್ದಾರಿಯ ಪೆಟ್ರೋಲ್ ಪಂಪ್ ಮುಂದೆ ಶುಕ್ರವಾರ ಬೆಳಿಗ್ಗೆ ಟ್ರಕ್ ಮತ್ತೊಂದು ಟ್ರಕ್ ಗಳಿಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೆಟ್ರೋಲ್ ಪಂಪ್ ಮುಂದೆ ಈ ಘಟನೆ ನಡೆದಿದೆ ಎಂದು ಅವರು ಹೇಳಿದರು.
ಘಟನೆಯಲ್ಲಿ ಕೆಲವರಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಘಟನೆಯಲ್ಲಿ ಹಲವಾರು ಜನರು ಸಾವನ್ನಪ್ಪಿದ್ದಾರೆ ಎಂದು ಕೆಲವು ವರದಿಗಳು ತಿಳಿಸಿವೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಇತರ ವಾಹನಗಳಿಗೆ ಡಿಕ್ಕಿ ಹೊಡೆದ ಟ್ರಕ್ ರಾಸಾಯನಿಕವನ್ನು ತುಂಬಿತ್ತು.”ಬೆಂಕಿಯು ಹಲವಾರು ಟ್ರಕ್ಗಳನ್ನು ಆವರಿಸಿದೆ. ಘಟನೆಯಲ್ಲಿ ಭಾಗಿಯಾಗಿರುವ ಟ್ರಕ್ ಗಳ ಸಂಖ್ಯೆ ಸ್ಪಷ್ಟವಾಗಿಲ್ಲ. ಸುಟ್ಟ ಗಾಯಗಳಾಗಿರುವ ಕೆಲವರನ್ನು ಆಂಬ್ಯುಲೆನ್ಸ್ ಗಳಲ್ಲಿ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ ಎಂದು ಭಂಕ್ರೋಟಾದ ಸ್ಟೇಷನ್ ಹೌಸ್ ಆಫೀಸರ್ ಮನೀಶ್ ಗುಪ್ತಾ ತಿಳಿಸಿದ್ದಾರೆ.ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಅಗ್ನಿಶಾಮಕ ದಳಗಳು ಸ್ಥಳಕ್ಕೆ ತಲುಪಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿವೆ.