ಗದಗ : ಗದಗ ಜಿಲ್ಲೆಯಲ್ಲಿ ಮೊಹರಂ ಹಬ್ಬ ಆಚರಣೆ ವೇಳೆ ಘೋರ ದುರಂತವೊಂದು ಸಂಭವಿಸಿದ್ದು, ಹೃದಯಾಘಾತದಿಂದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೊಹರಂ ಹಬ್ಬದ ಅಂಗವಾಗಿ ಅಲಿ ದೇವರು ಹೊತ್ತಿದ್ದ ಮತ್ತು ಹೆಜ್ಜೆ ಮಜಲು ಆಡುತ್ತಿದ್ದ ಇಬ್ಬರು ವ್ಯಕ್ತಿಗಳು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಗದಗ ತಾಲೂಕಿನ ಲಕ್ಕುಂಡಿಯಲ್ಲಿ ಇಮಾಮ್ ಸಾಬ್(55), ಹರ್ಲಾಪೂರ ಗ್ರಾಮದ ಶರೀಫ್ ಮೂಲಿಮನಿ(40) ಮೃತರು.
ಮೊಹರಂ ಹಬ್ಬದ ಸಂಭ್ರಮದಲ್ಲಿದ್ದ ಗ್ರಾಮಗಳಲ್ಲಿ ಸೂತಕದ ಛಾಯೆ ಆವರಿಸಿದ್ದು, ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.