ಮುಂಬೈ: ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಎರಡು ಬಾರಿ ಭೂಮಿ ಕಂಪಿಸಿದೆ. ಸಂಜೆ 5:15 ಮತ್ತು 5:28 ಕ್ಕೆ ಕ್ರಮವಾಗಿ ರಿಕ್ಟರ್ ಮಾಪಕದಲ್ಲಿ 3.5 ಮತ್ತು 3.3 ರ ತೀವ್ರತೆಯ ಎರಡು ಪ್ರಬಲ ಭೂಕಂಪಗಳು ಸಂಭವಿಸಿವೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ದೃಢಪಡಿಸಿದೆ.
ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಹೊರತಾಗಿ, ಪಾಲ್ಘರ್ ಜಿಲ್ಲಾಧಿಕಾರಿಗಳ ಕಚೇರಿ ಕೂಡ ಕಂಪನ ಆಗಿರುವುದನ್ನು ದೃಢಪಡಿಸಿದೆ. ಭೂಕಂಪದಿಂದಾಗಿ ಇದುವರೆಗೆ ಯಾವುದೇ ಹಾನಿಯಾದ ವರದಿಯಾಗಿಲ್ಲ.
ಕಳೆದ ವರ್ಷ ನವೆಂಬರ್‌ನಲ್ಲಿ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ(ಎನ್‌ಸಿಎಸ್) ತಿಳಿಸಿದೆ.