
ಬೆಂಗಳೂರು : ಬೆಂಗಳೂರಿನಲ್ಲಿ ಪ್ರತ್ಯಕ್ಷವಾಗಿರುವ ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಚಿರತೆ ದಾಳಿ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಬೊಮ್ಮನಹಳ್ಳಿ ಪ್ರದೇಶದ ಅಪಾರ್ಟ್ಮೆಂಟ್ ಒಂದರಲ್ಲಿ ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿ ಕಿರಣ್ ಎಂಬುವರ ತಲೆ ಹಾಗೂ ಕುತ್ತಿಗೆಯ ಭಾಗಕ್ಕೆ ಪರಚಿದೆ. ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ, ಸಂಪೂರ್ಣವಾಗಿ ಸಿದ್ಧತೆ ಮಾಡಿಕೊಂಡಿದ್ದು, ಈಗಾಗಲೇ ಚಿರತೆಗೆ ಅರವಳಿಕೆ ಮದ್ದು ನೀಡಿದೆ.
ಚಿರತೆಯು ಕಟ್ಟಡದ ಬೇಸ್ಮೆಂಟ್ ನಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರವಳಿಕೆ ಮತ್ತು ನೀಡಲು ಬಂದಿದ್ದ ಅರಣ್ಯ ಸಿಬ್ಬಂದಿ ಕಿರಣ್ ಮೇಲೆ ದಾಳಿ ಮಾಡಿದ ಪರಿಣಾಮ ಕಿರಣ್ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.